ಚೆನ್ನೈ: ವಿವಾದದ ಕಿಡಿ ಹೊತ್ತಿಸಿರುವ ಪೌರತ್ವ ಕಾನೂನು ವಿರೋಧಿ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡುವುದಾಗಿ ಡಿಎಂಕೆ ಸ್ಪಷ್ಟಪಡಿಸಿದೆ. ಸ್ಪಲ್ಪ ಭಿನ್ನಾಭಿಪ್ರಾಯಗಳಿವೆ. ಇದನ್ನು ನಿರಾಕರಿಸುವುದಿಲ್ಲ. ಆದರೆ ಇದು ಬೃಹತ್ ಹೋರಾಟಕ್ಕೆ ಒಟ್ಟಿಗೆ ಹೆಜ್ಜೆ ಹಾಕಲು ಅಡ್ಡಿಯಾಗದು ಎಂದು ಡಿಎಂಕೆ ನಾಯಕಿ ಕನಿಮೋಳಿ ಸ್ಪಷ್ಟಪಡಿಸಿದ್ದಾರೆ. ಕಳೆದ ವಾರ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕರೆದಿದ್ದ ಪ್ರತಿಪಕ್ಷಗಳ ನಾಯಕರ ಸಭೆಯಿಂದ ಡಿಎಂಕೆ ಕೂಡ ದೂರ ಉಳಿದಿತ್ತು