Tuesday, April 13, 2021

ದೆಹಲಿ, ಮುಂಬೈಯಿಂದ ಕೊಲ್ಕತ್ತಾಕ್ಕೆ ವಿಮಾನ ಸೇವೆ ಸ್ಥಗಿತ

ನವದೆಹಲಿ: ಮಾರಕ ಕೊರೋನಾ ನಿಯಂತ್ರಿಸುವ ಸಂಬಂಧ ಕೊರೋನಾ ಹಾಟ್ ಸ್ಪಾಟ್ ಗಳೆಂದು ಗುರುತಿಸಿಕೊಂಡಿರುವ ನಗರಗಳಿಂದ ಕೊಲ್ಕತ್ತಾಕ್ಕೆ ವಿಮಾನ ಯಾನ ಸೇವೆ ರದ್ದುಪಡಿಸಲಾಗಿದೆ. ಜುಲೈ 6ರಿಂದ 19ರ ತನಕ ದೇಶಿಯ ವಿಮಾನಯಾನ ಸೇವೆ ರದ್ದುಪಡಿಸಲಾಗಿದೆ. ದೆಹಲಿ, ಮುಂಬೈ, ಪುಣೆ, ನಾಗ್ಪುರ, ಚೆನ್ನೈ ಮತ್ತು ಅಹಮ್ಮದಾಬಾದ್ ನಿಂದ ಯಾವುದೇ ವಿಮಾನ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಆಗಮಿಸುವುದನ್ನು ತಡೆಹಿಡಿಯಲಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮನವಿ ಮೇರೆಗೆ ಈ  ಕ್ರಮ ತೆಗೆದುಕೊಳ್ಳಲಾಗಿದೆ. ಕಳೆದ ವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದ ಮಮತಾ ಬ್ಯಾನರ್ಜಿ ಕೊರೋನಾ ತಡೆಗಟ್ಟಲು ವಿಮಾನ ಯಾನ ಸ್ಥಗಿತ ಅತೀ ಅಗತ್ಯವಾಗಿದೆ ಎಂದು ಹೇಳಿದ್ದರು. ಕೊಲ್ಕತ್ತಾದಲ್ಲಿ ಕೊರೋನಾ ಅತ್ಯಂತ ಗಂಭೀರ  ಹಂತಕ್ಕೆ ತಲುಪಿದ್ದು, ಇದುವರೆಗೂ ನಿಯಂತ್ರಣಕ್ಕೆ ಬಂದಿಲ್ಲ

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!