newsics.com
ಭೋಪಾಲ್: ಆಸ್ಪತ್ರೆಯಲ್ಲಿ ವೃದ್ದರೊಬ್ಬರನ್ನು ಸ್ಟ್ರೆಚರ್ ಇಲ್ಲದೆ ಬಟ್ಟೆಯಲ್ಲಿಯೇ ಎಳೆದುಕೊಂಡು ಹೋಗಿರುವ ಮನಕಲಕುವ ಘಟನೆ ನಡೆದಿದೆ.
ಹೌದು. ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಆಸ್ಪತ್ರೆ ಸದ್ಯ ಸುದ್ದಿಯಲ್ಲಿದೆ. ಎರಡೂ ಕಾಲುಗಳು ಗಾಯಗೊಂಡಿರುವ ವೃದ್ದರೊಬ್ಬರು ಚಿಕಿತ್ಸೆಗಾಗಿ ಈ ಆಸ್ಪತ್ರೆಗೆ ಬಂದಿದ್ದಾರೆ. ಆದರೆ ಈ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಇಲ್ಲದೆ ಸಂಬಂಧಿಕರೊಬ್ಬರು ಬಟ್ಟೆಯಲ್ಲಿ ಕುಳಿತುಕೊಳ್ಳುವಂತೆ ಹೇಳಿ ಎಳೆದುಕೊಂಡು ಹೋಗಿದ್ದಾರೆ.
ಈ ವೀಡಿಯೋವನ್ನು ಅಲ್ಲೇ ಇದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.