Tuesday, April 13, 2021

ಭಾರತದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಇಲ್ಲ, ಪಾಕ್’ನಲ್ಲಿ ಶಾಕ್!

ನವದೆಹಲಿ/ ಇಸ್ಲಾಮಾಬಾದ್: ಭಾರತದಲ್ಲಿ ಕಳೆದ 21 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗಿದ್ದು, 22 ನೇ ದಿನವಾದ ಇಂದು ಯಥಾಸ್ಥಿತಿಯನ್ನು ಕಾಯ್ದುಕೊಂಡಿದೆ.
ಆದರೆ, ಪಾಕಿಸ್ತಾನದಲ್ಲಿ ಒಂದೇ ದಿನ ಪೆಟ್ರೋಲ್ ಬೆಲೆಯಲ್ಲಿ 25.58 ರೂಪಾಯಿ ಏರಿಕೆಯಾಗಿದ್ದು, ಪಾಕಿಸ್ತಾನದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಈಗ 100.10 ರೂಪಾಯಿ ತಲುಪಿದೆ. ಡೀಸೆಲ್ ಬೆಲೆಯಲ್ಲೂ ಏರಿಕೆಯಾಗಿದ್ದು, ಪ್ರತಿ ಲೀಟರ್ ಬೆಲೆ ಈಗ 101.46 ರೂಪಾಯಿ ತಲುಪಿದೆ. ಈ ಬೆಲೆಯೇರಿಕೆ ಪಾಕಿಸ್ತಾನ ಜನತೆಯನ್ನು ಬೆಚ್ಚಿಬೀಳಿಸಿದೆ.
ಈ ಮೊದಲೇ ಪಾಕಿಸ್ತಾನ ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೊರೋನಾ ಮಹಾಮಾರಿ ಅಲ್ಲಿನವರ ಬದುಕನ್ನು ಕಂಗೆಡಿಸಿದೆ. ಇದರ ಜತೆಗೆ ಈಗ ಪೆಟ್ರೋಲ್ ಹಾಗೂ ಡೀಸೆಲ್ ದರ ಮುಗಿಲು ಮುಟ್ಟಿರುವುದರಿಂದ ಅಲ್ಲಿನ ಸರ್ಕಾರದ ವಿರುದ್ಧ ಜನತೆಯ ಆಕ್ರೋಶ ವ್ಯಕ್ತವಾಗುತ್ತಿದೆ.
ಇನ್ನು ಭಾರತದಲ್ಲಿ ಸತತ 21 ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಗುವವರೆಗೂ ಸುಮ್ಮನಿದ್ದ ಕಾಂಗ್ರೆಸ್ ಈಗ ಪ್ರತಿಭಟನೆಗೆ ಸಜ್ಜಾಗುತ್ತಿದ್ದು, ಸೋಮವಾರ (ಜೂನ್ 29) ಪ್ರತಿಭಟನೆ ನಡೆಸುವುದಾಗಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!