Wednesday, November 30, 2022

ಮೂವರು ಭೌತ ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ

Follow Us

ನವದೆಹಲಿ : ಭೌತಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿಯನ್ನು ಮೂವರು ವಿಜ್ಞಾನಿಗಳಿಗೆ ಮಂಗಳವಾರ ಘೋಷಿಸಲಾಗಿದೆ.

ಅಲೈನ್ ಆಸ್ಪೆಕ್ಟ್, ಜಾನ್ ಕ್ಲೌಸರ್ ಮತ್ತು ಆಂಟನ್ ಝೈಲಿಂಗರ್ ಅವರಿಗೆ ಈ ವರ್ಷದ ಭೌತಶಾಸ್ತ್ರದ ನೊಬೆಲ್ ಪ್ರಶಸ್ತಿ ಲಭಿಸಿದೆ. ಭೌತವಿಜ್ಞಾನಿಗಳ ಕ್ವಾಂಟಮ್ ಮಾಹಿತಿ ವಿಜ್ಞಾನದಲ್ಲಿನ ಕೆಲಸಕ್ಕಾಗಿ ಜಂಟಿಯಾಗಿ ನೊಬೆಲ್ ಪ್ರಶಸ್ತಿ ನೀಡಲಾಗಿದೆ. ಫೋಟಾನ್‌ಗಳೊಂದಿಗಿನ ಪ್ರಯೋಗ ಹಾಗೂ ಕ್ವಾಂಟಮ್ ಮಾಹಿತಿ ವಿಜ್ಞಾನದ ವಿಷಯದಲ್ಲಿನ ಸಂಶೋಧನೆಗಾಗಿ ಮೂವರಿಗೆ ನೊಬೆಲ್ ಪ್ರಶಸ್ತಿ ನೀಡಲಾಗಿದೆ.

ಬಹುಮಾನವು 10 ಮಿಲಿಯನ್ ಸ್ವೀಡಿಷ್ ಕ್ರೋನರ್ (ಸುಮಾರು ಒಂದು ಕೋಟಿ ರೂ.) ನಗದು ಪ್ರಶಸ್ತಿಯನ್ನು ಹೊಂದಿದೆ. ಇದೇ ಡಿಸೆಂಬರ್ 10 ರಂದು ಪ್ರಶಸ್ತಿಯನ್ನು ಹಸ್ತಾಂತರಿಸಲಾಗುವುದು. ನೊಬೆಲ್ ಸಂಸ್ಥಾಪಕ ಹಾಗೂ ಸ್ವೀಡಿಷ್ ಸಂಶೋಧಕ ಆಲ್ಫ್ರೆಡ್ ನೊಬೆಲ್ ಅವರು 1895 ರಲ್ಲಿ ಬರೆದ ಉಯಿಲಿನ (ವಿಲ್) ಪ್ರಕಾರ ಈ ಬಹುಮಾನ ನೀಡಲಾಗುತ್ತದೆ.

ಸತ್ಯನಾರಾಯಣ ಪೂಜೆ ಮಾಡಿದ್ರೂ ಸಿಗಲಿಲ್ಲ ಹೆಣ್ಣು: ಅರ್ಚಕನ ಕಿವಿ ಕಚ್ಚಿದ ಅಪ್ಪ, ಮಗ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!