newsics.com
ನವದೆಹಲಿ: ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು, ಎಲ್ಲರಿಗೂ ಆಹಾರಧಾನ್ಯ ಒದಗಿಸಿ ಎಂದು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಲಸೆ ಕಾರ್ಮಿಕರ ದುರವಸ್ಥೆ ಮತ್ತು ಲಾಕ್ ಡೌನ್ ಪರಿಣಾಮಗಳಿಗೆ ಸಂಬಂಧಿಸಿದ ತನ್ನದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠ, ಇಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಲಾದ ವಲಸೆ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸಂಖ್ಯೆಯೊಂದಿಗೆ ಹೊಸ ಚಾರ್ಟ್ ಅನ್ನು ಸಲ್ಲಿಸುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದೆ.
ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಸಂಸ್ಕೃತಿ ಮತ್ತು ಕರ್ತವ್ಯ ಎಂದಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ)ಯಡಿ ಆಹಾರ ಧಾನ್ಯಗಳು ದೇಶದ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.