ನವದೆಹಲಿ: ಮಹಾತ್ಮಾ ಗಾಂಧೀಜಿ ಬಗ್ಗೆ ಹಗುರವಾಗಿ ಮಾತನಾಡಿದ್ದ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದ್ದು, ನೋಟಿಸ್ ಕೂಡ ಜಾರಿ ಮಾಡಿದೆ.
ದೆಹಲಿಯಲ್ಲಿ ಮಂಗಳವಾರ ನಡೆಯುವ ಸಂಸದೀಯ ಸಭೆಗೆ ಬಾರದಂತೆ ಅನಂತಕುಮಾರ್ ಹೆಗಡೆ ಅವರಿಗೆ ಬಿಜೆಪಿ ಹೈಕಮಾಂಡ್ ನಿಷೇಧ ಹೇರಿದೆ.
ಭಾನುವಾರ ಬೆಂಗಳೂರಿನ ಖಾಸಗಿ ಸಮಾರಂಭದಲ್ಲಿ ಮಾತನಾಡಿದ್ದ ಅನಂತಕುಮಾರ್ ಹೆಗಡೆ, ”ಗಾಂಧಿ ಅಂಥವರನ್ನು ”ಮಹಾತ್ಮ” ಎಂದು ಭಾರತದಲ್ಲಿ ಏಕೆ ಕರೆಯುತ್ತಾರೋ ಎಂದಿದ್ದರು. ಗಾಂಧಿ ನಡೆಸಿದ ಸ್ವಾತಂತ್ರ್ಯ ಹೋರಾಟವನ್ನು ದೊಡ್ಡ ನಾಟಕ. ಬ್ರಿಟೀಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಗಾಂಧಿಯನ್ನು ಪೊಲೀಸರು ಎಂದೂ ಮುಟ್ಟಿಲ್ಲ. ಬ್ರಿಟೀಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ ಎಂದು ಅನಂತಕುಮಾರ್ ಹೇಳಿದ್ದರು.
ಗಾಂಧೀಜಿ ಕುರಿತು ಆಕ್ಷೇಪಾರ್ಹ ಹೇಳಿಕೆ; ಸಂಸದ ಹೆಗಡೆಗೆ ಬಿಜೆಪಿ ನಿಷೇಧ
Follow Us