newsics.com
ಐಜ್ವಾಲ್: ಮಿಜೋರಾಂನಲ್ಲಿ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯೊ ರಾಯ್ಟೊ ಒಂದು ವಿಚಿತ್ರ ಬಹುಮಾನದ ಘೋಷಣೆ ಮಾಡಿದ್ದಾರೆ.
ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮಕ್ಕಳನ್ನು ಹೊಂದಿದ್ದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದಾರೆ. ವಿಶ್ವ ಅಪ್ಪಂದಿರ ದಿನ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ.
ಜನರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಸರ್ಕಾರದಿಂದ ಸಿಗಬೇಕಾದ ಸವಲತ್ತುಗಳು ಕಡಿಮೆಯಾಗುತ್ತಿದೆ. ಈ ಕಾರಣಕ್ಕಾಗಿ ಈ ಘೋಷಣೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
ನೆರೆಯ ಅಸ್ಸಾಂನಲ್ಲಿ ಕಡ್ಡಾಯ ಕುಟುಂಬ ಕಲ್ಯಾಣದ ಮಾತುಗಳು ಕೇಳಿ ಬರುತ್ತಿರುವಾಗ ಮಿಜೋರಾಂನಲ್ಲಿ ಸಚಿವರೇ ಅತೀ ಹೆಚ್ಚು ಮಕ್ಕಳನ್ನು ಹೊಂದಿ ಎಂಬ ಹೇಳಿಕೆ ನೀಡಿದ್ದಾರೆ