Tuesday, April 13, 2021

ಕೇರಳದಲ್ಲಿ ಕೊರೋನಾಕ್ಕೆ ಮತ್ತೊಂದು ಬಲಿ

ತಿರುವನಂತಪುರಂ:  ಕೇರಳದಲ್ಲಿ ಮಾರಕ ಕೊರೋನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಅಬುಧಾಬಿಯಿಂದ ಕೇರಳಕ್ಕೆ ಹಿಂತಿರುಗಿದ್ದ ವ್ಯಕ್ತಿಯೊಬ್ಬರು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಕೇರಳದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿದೆ. ಮೇ11ರಂದು ಅವರು ಕೇರಳಕ್ಕೆ ಹಿಂತಿರುಗಿದ್ದರು.ಊರಿಗೆ ಬಂದ ಬಳಿಕ ರೋಗ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ ಅವರನ್ನು ಕೋಟ್ಟಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಸೇರಿಸಲಾಗಿತ್ತು. ಪತ್ತನಂತಿಟ್ಟ ನಿವಾಸಿಯಾಗಿದ್ದಾರೆ. ಇದೇ ವೇಳೆ ಮಾರಕ ಕೊರೋನಾ ರಾಜ್ಯದಲ್ಲಿ  ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ನಿರ್ಬಂಧ ಬಿಗಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!