newsics.com
ತಿರುವನಂತಪುರಂ: ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ.
ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 130 ದಡಾರ ಪ್ರಕರಣ ದೃಢಪಟ್ಟಿದೆ.
ಇದು ಸೋಂಕು ರೋಗವಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಮಹಾರಾಷ್ಟ್ರದ ಆರೋಗ್ಯ ಇಲಾಖೆ ಕೂಡ ಈ ಸಂಬಂಧ ಜನರಿಗೆ ವಿಶೇಷ ಸೂಚನೆಗಳನ್ನು ನೀಡಿದೆ