Saturday, April 17, 2021

ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಸ್ವಾಮೀಜಿಯ ಬರ್ಬರ ಹತ್ಯೆ

ಮುಂಬೈ: ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಸ್ವಾಮೀಜಿಯನ್ನು ಅವರ ಆಶ್ರಮದಲ್ಲಿಯೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಹಾರಾಷ್ಟ್ರದ ನಾಂದೇಡ್ ನಲ್ಲಿ ಈ ಘಟನೆ ಸಂಭವಿಸಿದೆ. ಮಧ್ಯರಾತ್ರಿ ಸುಮಾರು ಮೂರು ಗಂಟೆಗೆ ಆಶ್ರಮಕ್ಕೆ ದಾಳಿ ನಡೆಸಿದ ದುಷ್ಕರ್ಮಿಗಳು  ಸ್ವಾಮೀಜಿಯ ಹತ್ಯೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಹಾರಾಷ್ಟ್ರದ ಪಾಲ್ಗಾರ್ ನಲ್ಲಿ ಇತ್ತೀಚೆಗೆ ಇಬ್ಬರು ಸಾಧುಗಳನ್ನು ಮತ್ತು ಅವರ ಜತೆಗಿದ್ದ ಕಾರು ಚಾಲಕನನ್ನು ಬರ್ಬರವಾಗಿ ಹೊಡೆದು ಕೊಲ್ಲಲಾಗಿತ್ತು. ಮಹಾರಾಷ್ಟ್ರ ಬಿಜೆಪಿ ಘಟಕ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದೆ. ರಾಜ್ಯದಲ್ಲಿ ಕಾನೂನು ಮತ್ತು ಶಿಸ್ತು ಪಾಲನೆ ಕುಸಿದಿದೆ ಎಂದು ಬಿಜೆಪಿ ಆರೋಪಿಸಿದೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!