Saturday, April 17, 2021

ನಟಿ ಶಮ್ನಾ ಕಾಸಿಂ ಬ್ಲಾಕ್ ಮೇಲ್ ಯತ್ನ: ಆರೋಪಿಯ ಬಂಧನ

ಕೊಚ್ಚಿ: ತೆಲುಗು ಮತ್ತು ತಮಿಳು ಚಿತ್ರರಂಗದಲ್ಲಿ  ಬೇಡಿಕೆಯ ನಟಿಯಾಗಿರುವ ಶಮ್ನಾ ಕಾಸಿಂ ಅವರನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದ ಆರೋಪಿಯನ್ನು ಕೇರಳದ ಕೊಚ್ಚಿಯಲ್ಲಿ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು  ರಫೀಕ್ ಎಂದು ಗುರುತಿಸಲಾಗಿದೆ. ಮೂಲತ: ಕೇರಳದ ಕಣ್ಣೂರು ಜಿಲ್ಲೆಯವರಾಗಿರುವ ಶಮ್ನಾ ಕಾಸಿ0 ಇದೀಗ ಕೊಚ್ಚಿಯಲ್ಲಿ ನೆಲೆಸಿದ್ದಾರೆ. ಮಲೆಯಾಳಂ, ತೆಲುಗು  ಮತ್ತು ತಮಿಳು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ವೈವಾಹಿಕ ಸಂಬಂಧದ ಮಾತುಕತೆ ನಡೆಸುವ ನೆಪ ನೀಡಿ ಆರೋಪಿಗಳು ನಟಿಯ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದರು. ದುಬೈನಲ್ಲಿ ಚಿನ್ನಾಭರಣ  ಅಂಗಡಿ ಹೊಂದಿರುವುದಾಗಿ ಹೇಳಿದ್ದರು. ಆದರೆ ಆ ಬಳಿಕ  ತಮ್ಮ ವರಸೆ ಬದಲಾಯಿಸಿದ ಆರೋಪಿಗಳು ನಟಿಯನ್ನು ಬ್ಲಾಕ್ ಮೇಲ್ ಮಾಡಲು ಯತ್ನಿಸಿದರು ಎಂದು ಆರೋಪಿಸಲಾಗಿದೆ. ನಟಿಯರು ಮತ್ತು ಮಾಡೆಲ್ ಗಳನ್ನು ಬ್ಲಾಕ್ ಮೇಲ್ ಮಾಡಿ ಅವರ ಮೂಲಕ ಚಿನ್ನ ಕಳ್ಳ ಸಾಗಾಟ ನಡೆಸುವ ಜಾಲ ಇದರ ಹಿಂದಿದೆ ಎಂದು ಶಂಕಿಸಲಾಗಿದೆ. ಇದೇ ತಂಡದ ಸದಸ್ಯರು ಇನ್ನೋರ್ವ ನಟಿ ಮತ್ತು ಮಾಡೆಲ್ ಗೆ ಕೂಡ ಇದೇ ರೀತಿ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ, ಇದೀಗ ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿ ನಿರತರಾಗಿರುವ ಶಮ್ನಾ ಕಾಸಿಂ, ಸಮಗ್ರ ತನಿಖೆ ನಡೆಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾರೆ.                              

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!