ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಬಳಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆ ಆರಂಭವಾಗಿದೆ. ಇಂದು ಮುಂಜಾನೆ ಖಚಿತ ಮಾಹಿತಿ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ಶೋಧ ಕಾರ್ಯ ಈಗಲೂ ಮುಂದುವರಿದಿದೆ. ಇದೀಗ ಓರ್ವ ಭಯೋತ್ಪಾದಕ ಹತನಾಗಿದ್ದಾನೆ. ಉಳಿದ ಭಯೋತ್ಪಾದಕರು ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ವಹಿಸಲಾಗಿದೆ. ಘಟನಾ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನಿಸಲಾಗಿದೆ.
ಕಳೆದ 20 ದಿನಗಳಲ್ಲಿ ಭಯೋತ್ಪಾದಕರ ವಿರುದ್ಧದ ಕಾರ್ಯಾಚರಣೆಯನ್ನು ಭದ್ರತಾಪಡೆ ತೀವ್ರಗೊಳಿಸಿದೆ. ಇದು ಉಗ್ರರಲ್ಲಿ ನಡುಕ ಸೃಷ್ಟಿಸಿದೆ.