Wednesday, July 6, 2022

45 ವರ್ಷದೊಳಗಿನ ಪೊಲೀಸ್ ಸಿಬ್ಬಂದಿ ಮಾತ್ರ ಮೋದಿ ಭದ್ರತೆಗೆ ನಿಯೋಜನೆ

Follow Us

ನವದೆಹಲಿ: ರಾಮಮಂದಿರ ನಿರ್ಮಾಣ ಭೂಮಿಪೂಜೆ ವೇಳೆ ಪ್ರಧಾನಿ ಮೋದಿಯವರ ಭದ್ರತೆಗೆ 45 ವರ್ಷ ದಾಟದ ಹಾಗೂ ಕೊರೋನಾ ನೆಗೆಟಿವ್ ದೃಢಪಟ್ಟಿರುವ ಪೊಲೀಸ್ ಸಿಬ್ಬಂದಿಯನ್ನು ಮಾತ್ರ ನಿಯೋಜಿಸಲಾಗುತ್ತಿದೆ.
ಉತ್ತರಪ್ರದೇಶದ ಸರ್ಕಾರ ಭೂಮಿ ಪೂಜೆ ಕಾರ್ಯಕ್ರಮಕ್ಕೆ 3,500 ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸುತ್ತಿದ್ದು, ಎಲ್ಲರೂ 45 ವರ್ಷದೊಳಗಿನ ಸಿಬ್ಬಂದಿ ಮಾತ್ರ ಇರುತ್ತಾರೆ ಎಂದು ಉತ್ತರ ಪ್ರದೇಶ ಗೃಹ ಸಚಿವಾಲಯ ತಿಳಿಸಿದೆ. ಅಯೋಧ್ಯೆಯಲ್ಲಿ ಈಗಾಗಲೇ ಇರುವ 20 ಕಂಪನಿಗಳೊಂದಿಗೆ ಒಟ್ಟು 40 ಕಂಪನಿಗಳನ್ನು ನಿಯೋಜಿಸಲಾಗುತ್ತಿದೆ.

ಮತ್ತೆ 53 ದೇಶಗಳಿಂದ ಬರಲಿದ್ದಾರೆ 1.20 ಲಕ್ಷ ಜನ

ಭದ್ರತೆಗಾಗಿ ನಿಯೋಜಿಸಲಿರುವ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷಿಸುವ ಪ್ರಕ್ರಿಯೆ ಈಗಾಗಲೇ ನಡೆಸಲಾಗುತ್ತಿದೆ. ಕಾನೂನು ಸುವ್ಯವಸ್ಥೆಯ ಎಡಿಜಿ ಪ್ರಶಾಂತ್ ಕುಮಾರ್ ಮತ್ತು ಲಕ್ನೋ ವಲಯದ ಎಡಿಜಿ ಸತ್ಯ ನಾರಾಯಣ್ ಸಬತ್ ಅವರು ಭೂಮಿ ಪೂಜೆ ಕಾರ್ಯಕ್ರಮಕ್ಕೆ ಮುಂಚಿತವಾಗಿ ಅಯೋಧ್ಯೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಅಯೋಧ್ಯೆಯಲ್ಲಿ ಉಸ್ತುವಾರಿ ನೋಡಿಕೊಳ್ಳಲು ಎಸ್‍ಎಸ್‍ಪಿ ದೀಪಕ್ ಕುಮಾರ್ ಮತ್ತು 8 ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇಬ್ಬರು ಡಿಐಜಿ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!