Saturday, April 17, 2021

15 ಸಾವಿರ ಭಾರತೀಯರನ್ನು ಕರೆತರಲು ಮೇ 7ರಿಂದ ಕಾರ್ಯಾಚರಣೆ

ನವದೆಹಲಿ: ಮೇ 7ರಿಂದ 13ರವರೆಗೆ ಏರ್ ಇಂಡಿಯಾದ 64 ವಿಮಾನಗಳು ವಿದೇಶಗಳಲ್ಲಿರುವ 15 ಸಾವಿರ ಭಾರತೀಯರನ್ನು ಕರೆತರಲಿವೆ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.
ವಿದೇಶದಲ್ಲಿರುವ ಭಾರತೀಯರನ್ನು ಕರೆತರಲು ಪ್ರಯಾಣ ಶುಲ್ಕ ವಿಧಿಸಲಾಗುತ್ತಿದ್ದು, ಲಂಡನ್- ದೆಹಲಿ ವಿಮಾನ ಪ್ರಯಾಣಕ್ಕೆ 50 ಸಾವಿರ, ಢಾಕಾ-ದೆಹಲಿ ಪ್ರಯಾಣಕ್ಕೆ 12 ಸಾವಿರ ಟಿಕೆಟ್ ದರ ನಿಗದಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಪ್ರಯಾಣಕ್ಕೂ ಮುನ್ನ ಎಲ್ಲಾ ಪ್ರಯಾಣಿಕರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಾಲಗುವುದು ಮತ್ತು ಇಲ್ಲಿಗೆ ಬಂದ ನಂತರ 14 ದಿನಗಳ ಕಾಲ ಕ್ವಾರಂಟೈನ್ ಒಳಪಡಿಸಲಾಗುವುದು ಎಂದು ಪುರಿ ಹೇಳಿದ್ದಾರೆ.
ಯುಎಇ, ಅಮೆರಿಕ, ಇಂಗ್ಲೆಂಡ್, ಮಲೇಷ್ಯಾ, ಸಿಂಗಾಪುರ್, ಫಿಲಿಪ್ಪಿನ್ಸ್, ಸೌದಿ ಅರೇಬಿಯಾ, ಕತಾರ್, ಬಾಂಗ್ಲಾದೇಶ, ಬಹ್ರೇನ್, ಕುವೈತ್ ಮತ್ತಿತ್ತರ ದೇಶಗಳಿಂದ ಅನಿವಾಸಿ ಭಾರತೀಯರನ್ನು ಕರೆತರಬೇಕಿದೆ. ಯುಎಇ ಮತ್ತು ಮಾಲ್ಡೀವ್ಸ್ ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ಮಂಗಳವಾರ ನೌಕಾಸೇನೆಯ 3 ಹಡಗುಗಳನ್ನು ಕಳುಹಿಸಲಾಗಿದೆ ಎಂದು ಸಚಿವ ಪುರಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!