Tuesday, April 13, 2021

ತಿರುಪತಿ ತಿಮ್ಮಪ್ಪನ ಸ್ಥಿರಾಸ್ತಿ ಮಾರಾಟಕ್ಕೆ ವಿರೋಧ- ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ

ತಿರುಪತಿ:  ನಿರ್ವಹಣೆ ಸಮಸ್ಯೆಯ ಕಾರಣ ಹೇಳಿ ತಿರುಪತಿ  ತಿಮ್ಮಪ್ಪನ 50 ಸ್ಥಿರಾಸ್ತಿಗಳನ್ನು ಮಾರಾಟ ಮಾಡುವ  ತಿರುಮಲ ತಿರುಪತಿ ದೇವಸ್ಥಾನ ಆಡಳಿತ ಮಂಡಳಿ  ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಭಕ್ತರು ತಿಮ್ಮಪ್ಪನ ಮೇಲಿನ ಭಕ್ತಿಯಿಂದ ಉಂಬಳಿ ನೀಡಿರುವ ಆಸ್ತಿಯನ್ನು ಟಿಟಿಡಿ .ಯಾಕೆ ಮಾರಾಟ ಮಾಡುತ್ತಿದೆ ಎಂದು ಆಂಧ್ರಪ್ರದೇಶ ಬಿಜೆಪಿ ಅಧ್ಯಕ್ಷ  ಕಣ್ಣ ಲಕ್ಷ್ಮೀ ನಾರಾಯಣ  ಪ್ರಶ್ನಿಸಿದ್ದಾರೆ. ಆಂಧ್ರ ಪ್ರದೇಶದ ಇತರ ಹಿಂದೂ ಸಂಘಟನೆಗಳು ಇದಕ್ಕೆ ಧ್ವನಿಗೂಡಿಸಿವೆ. ತಮಿಳುನಾಡಿನಲ್ಲಿ 23, ಆಂಧ್ರಪ್ರದೇಶದಲ್ಲಿ 26 ಮತ್ತು  ಹೃಷಿಕೇಶದ 1  ಸ್ಥಿರಾಸ್ತಿಯನ್ನು ಮಾರಾಟ ಮಾಡಲು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ನಿರ್ಧರಿಸಿದೆ. ಇದರಿಂದ 24 ಕೋಟಿ ರೂಪಾಯಿ ಆದಾಯ ಸಂಗ್ರಹವನ್ನು ನಿರೀಕ್ಷಿಸಲಾಗಿದೆ. ಈ ಮಧ್ಯೆ ಸಾಮಾಜಿಕ ಜಾಲ ತಾಣದಲ್ಲಿ ಕೂಡ ಇದು ಸದ್ದು ಮಾಡುತ್ತಿದ್ದು, ಸರ್ಕಾರ  ತಿಮ್ಮಪ್ಪನ ಆಸ್ತಿ ಮಾರಾಟದಿಂದ ಹಿಂದೆ ಸರಿಯಬೇಕು ಎಂದು  ಒತ್ತಾಯಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!