newsics.com
ಕೇರಳ: ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಬಿಗಿ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ಇದೀಗ ಎರಡು ಡೋಸ್ ಲಸಿಕೆ ಪಡೆದ 40,000 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಉನ್ನತ ಮೂಲಗಳ ಹೇಳಿಕೆ ಉಲ್ಲೇಖಿಸಿ ಎಂದು ವರದಿಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ತಂಡ ಇಲ್ಲಿಗೆ ಭೇಟಿ ನೀಡಿ, ಮಾಹಿತಿ ಸಂಗ್ರಹ ಮಾಡಿದಾಗ ಈ ವಿಚಾರ ತಿಳಿದು ಬಂದಿದೆ. ಪ್ರಮುಖವಾಗಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವವರು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಹಾಕಿಕೊಳ್ಳದೇ ಇರುವುದು ಇದಕ್ಕೆ ಮುಖ್ಯ ಕಾರಣ ಎಂದು ವರದಿಯಾಗಿದೆ.
ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಲಸಿಕೆ ಪಡೆದುಕೊಂಡಿರುವ 20 ಸಾವಿರ ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ನಿನ್ನೆ ಕೇರಳದಲ್ಲಿ 13, 049 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.