Monday, May 17, 2021

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com

ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.

ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು.

ಬೆಳಗ್ಗೆ 6 ಗಂಟೆ ಸುಮಾರಿಗೆ ಆಸ್ಪತ್ರೆಯ ಬ್ಲಾಕ್‌ನಲ್ಲಿನ ಆಮ್ಲಜನಕವು ಖಾಲಿಯಾಗಿದ್ದು, ಇದರಿಂದಾಗಿ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ. ಸೋಂಕಿತರು ಸಾವನ್ನಪ್ಪುತ್ತಿದ್ದಂತೆ ಕುಟುಂಬಸ್ಥರು ಆಸ್ಪತ್ರೆ ವಿರುದ್ಧ ಆಕ್ರೋಶಗೊಂಡಿದ್ದು, ಮಾತಿನ ಚಕಮಕಿ ನಡೆದಿದೆ. ಇದರಿಂದ ಕೆಲ‌ ಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!