Tuesday, April 13, 2021

ಮತ್ತೆ ಪಾಕ್ ಕಿರಿಕ್; 20 ಸಾವಿರ ಸೈನಿಕರ ನಿಯೋಜನೆ

ಕಾಶ್ಮೀರ: ಒಂದೆಡೆ ಚೀನಾ ವಾಸ್ತವಿಕ ಗಡಿ ರೇಖೆ ಬಳಿ ಉಪಟಳ ನೀಡುತ್ತಿರುವ ಬೆನ್ನಲ್ಲೇ ಇದೀಗ ಪಾಕ್ ಕೂಡ ಎಲ್ ಎ ಸಿ ಬಳಿ ಹೆಚ್ಚುವರಿ ಸೇನೆ ನಿಯೋಜಿಸಿದ್ದು ಭಾರತಕ್ಕೆ ತೊಂದರೆ ಕೊಡುವ ಪ್ರಯತ್ನ ಮುಂದುವರಿಸಿದೆ.
ಪಾಕ್ ಆಕ್ರಮಿತ ಕಾಶ್ಮೀರ ಹಾಗೂ ಗಿಲ್ಗಿಟ್-ಬಾಲ್ಟಿಸ್ತಾನ್ ನಲ್ಲಿ ಪಾಕಿಸ್ತಾನ ಹೆಚ್ಚುವರಿಯಾಗಿ 20 ಸಾವಿರ ಸೈನಿಕರನ್ನು ನಿಯೋಜಿಸಿದೆ. ಅಲ್ಲದೇ ಪಾಕ್ ನ ರೇಡಾರ್ ಗಳು ಕೂಡ ಸಂಪೂರ್ಣ ಚುರುಕಿನಿಂದ ಕೆಲಸ‌ ನಿರ್ವಹಿಸಲು ಆರಂಭಿಸಿದೆ‌.
ಕೇವಲ ಸೇನೆ ನಿಯೋಜನೆಯಲ್ಲದೆ ಗಡಿ ನಿಯಂತ್ರಣಾ ರೇಖೆ‌ಯಲ್ಲಿ ಪಾಕ್ ಭಾರತದ ವಿರುದ್ಧ ನಿರಂತರ ಶೆಲ್ ದಾಳಿ ನಡೆಸುತ್ತಲೇ ಇದೆ.
ಇವೆಲ್ಲದರ ಜತೆ ಇದೀಗ ಗಡಿಯಲ್ಲೂ ಸೇನೆ ಭದ್ರತೆ ಹೆಚ್ಚಿಸಿದ್ದು ಭಾರತವನ್ನು ಬೆದರಿಸುವ ತಂತ್ರ ಅನುಸರಿಸಲಾರಂಭಿಸಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!