ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ. ಪೂಂಛ್ ವಲಯದ ಕೃಷ್ಣಾ ಘಾಟ್ ನಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಭಾರತದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ನಾಗರಿಕರೊಬ್ಬರು ಗಾಯಗೊಂಡಿದ್ದಾರೆ.ಹುತಾತ್ಮರಾದ ಯೋಧರನ್ನು ಕರ್ನೈಲ್ ಸಿಂಗ್ ಎಂದು ಗುರುತಿಸಲಾಗಿದೆ
ಭಾರತದ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಗುಂಡಿನ ದಾಳಿ ನಡೆಸಿದೆ. ಪಾಕ್ ದುಸ್ಸಾಹಸಕ್ಕೆ ಭಾರತದ ಯೋಧರು ದಿಟ್ಟ ಪ್ರತ್ಯುತ್ತರ ನೀಡಿದ್ದಾರೆ.