ನವದೆಹಲಿ: ಕೊರೋನಾ ಮಹಾ ಮಾರಿಯ ಭೀತಿಯ ಮಧ್ಯೆ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಬೆಳಿಗ್ಗೆ 9 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗಿದ್ದು, ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧಾರಣೆ ಸೇರಿದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರಾಜ್ಯಸಭೆಯ ಕಲಾಪ ಮಧ್ಯಾಹ್ನ ನಡೆಯಲಿದೆ
ಅಗಲಿದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಲೋಕಸಭೆ, ಸದನ ಕಲಾಪ ಆರಂಭಗೊಳ್ಳುತ್ತಲೆ ಗೌರವ ನಮನ ಸಲ್ಲಿಸಿತು. ಹಲವು ಮಹತ್ವದ ಮಸೂದೆಗಳನ್ನು ಈ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಭಾರತ- ಚೀನಾ ಗಡಿಯಲ್ಲಿ ಸಂಘರ್ಷ, ಕೊರೋನಾ ಮಹಾ ಮಾರಿ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ ಮತ್ತು ದೆಹಲಿ ಹಿಂಸಾಚಾರದ ಕುರಿತು ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅಮೆರಿಕಕ್ಕೆ ತೆರಳಿದ್ದು, ಆರಂಭದ ದಿನಗಳಲ್ಲಿ ಅಧಿವೇಶನಕ್ಕೆ ಗೈರಾಗಲಿದ್ದಾರೆ.