Wednesday, March 3, 2021

ಆಹಾರ ಅರಸಿ ಬಂದ ಆನೆಗೆ ಬೆಂಕಿಹಚ್ಚಿದ ದುಷ್ಕರ್ಮಿಗಳು

newsics.com

ತಮಿಳುನಾಡು: ಹಸಿವಿನಿಂದ ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದ ಆನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಅವಮಾನವೀಯ ಘಟನೆ ನಡೆದಿದೆ.
ತಮಿಳುನಾಡಿನ ಮಸಿನಗುಡಿಯಲ್ಲಿ ಈ ಘಟನೆ ನಡೆದಿದೆ. ಬೈಕ್’ನ ಟೈರಿಗೆ ಬೆಂಕಿ ಹಚ್ಚಿ ಆನೆಯನ್ನು ಬೆದರಿಸಲು ಮುಂದಾಗಿದ್ದರು. ಆದರೆ ಬಳಿಕ ಕುಚೇಷ್ಟೆಯಿಂದ ಆನೆಯ ಮೇಲೆಯೇ ಹೊತ್ತಿ ಉರಿಯುವ ಟೈರನ್ನು ಎಸೆದಿದ್ದಾರೆ. ಇದರಿಂದ ಆನೆಯ ಬೆನ್ನು, ಕಿವಿ ಭಾಗಗಳಲ್ಲಿ ತೀವ್ರವಾಗಿ ಗಾಯಗೊಂಡಿತ್ತು. ನೋವಿನಿಂದ ಘೀಳಿಡುತ್ತಿದ್ದ ಆನೆಯನ್ನು ತೆಪ್ಪಕಾಡು ಆನೆ ಶಿಬಿರದಲ್ಲಿ ಚಿಕಿತ್ಸೆಗಾಗಿ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆನೆ ಇಂದು (ಜ.22) ಮೃತಪಟ್ಟಿದೆ ಎಂದು ವರದಿಯಾಗಿದೆ.
ಈ ದುಷ್ಕೃತ್ಯದ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಊರಿನ ಕೆಲವರನ್ನು ಬಂಧಿಸಿದ್ದಾರೆ. ಹೆಚ್ಚಿನ ತನಿಖೆ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ವೇಳೆಗೆ ಕಾಂಗ್ರೆಸ್ ನೂತನ ಅಧ್ಯಕ್ಷರ‌ ಆಯ್ಕೆ- ಕಾಂಗ್ರೆಸ್ ಕಾರ್ಯಕಾರಿಣಿ

ಮತ್ತಷ್ಟು ಸುದ್ದಿಗಳು

Latest News

ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಐಷಾರಾಮಿ ಹೋಟೆಲ್!

newsics.comವಾಷಿಂಗ್ಟನ್‌: ಇನ್ನು ನಾಲ್ಕೇ ವರ್ಷದಲ್ಲಿ ಅಂತರಿಕ್ಷದಲ್ಲೂ ಇಡ್ಲಿ, ಟೀ, ಕಾಫಿ ಸಿಗಬಹುದು.ಮುಂದಿನ 4 ವರ್ಷದಲ್ಲಿ ಅಂತರಿಕ್ಷದಲ್ಲಿ  “ವೊಯೇಜರ್‌ ಸ್ಟೇಷನ್‌’ ಎಂಬ ವೈಭವೋಪೇತ ಹೋಟೆಲೊಂದು...

ಮನೆಯಲ್ಲೇ ಲಸಿಕೆ ಪಡೆದ ಕೃಷಿ ಸಚಿವ; ವರದಿ ಕೇಳಿದ ಕೇಂದ್ರ

newsics.comನವದೆಹಲಿ: ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಇಂದು(ಮಾ.2) ತಮ್ಮ ಮನೆಯಲ್ಲೇ ಕೊರೋನಾ ಲಸಿಕೆ ಹಾಕಿಸಿಕೊಂಡಿರುವುದು ವಿವಾದಕ್ಕೆಡೆ ಮಾಡಿದೆ.ನರ್ಸ್ಗಳನ್ನು ಮನೆಗೆ ಕರೆಸಿಕೊಂಡು ಸಚಿವ ಬಿ.ಸಿ.ಪಾಟೀಲ್ ಕೊರೋನಾ ಲಸಿಕೆ ಹಾಕಿಸಿಕೊಂಡಿದ್ದು,...

ದಿನೇಶ್ ಕಲ್ಲಹಳ್ಳಿ ಯಾರೆಂದೇ ತಿಳಿದಿಲ್ಲ, ತನಿಖೆ ನಡೆಯಲಿ-ಸಚಿವ ರಮೇಶ್ ಜಾರಕಿಹೊಳಿ

newsics.com ಬೆಂಗಳೂರು: ಕಳೆದ 21 ವರ್ಷದಿಂದ ನಾನು ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ದಿನೇಶ್ ಕಲ್ಲಹಳ್ಳಿಯಾಗಲೀ ಯುವತಿಯಾಗಲಿ ಯಾರೆಂದು ತನಗೆ ತಿಳಿದಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ‌ಹೇಳಿಕೆ ನೀಡಿದ್ದಾರೆ. ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ ವಿಡಿಯೋ...
- Advertisement -
error: Content is protected !!