newsics.com
ಚೆನ್ನೈ: ಜಲ್ಲಿಕಟ್ಟು ಸ್ಪರ್ಧೆಗೆ ಅನುಮತಿ ನಿರಾಕರಿಸಿದ್ದನ್ನು ವಿರೋಧಿಸಿ ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಪ್ರಕರಣ ವರದಿಯಾಗಿದೆ. ರೊಚ್ಚಿಗೆದ್ದ ಜನರು ಪೊಲೀಸರ ಮೇಲೆ ಮನ ಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲೇಟಿನಿಂದ ರಕ್ಷಿಸಿಕೊಳ್ಳಲು ಪೊಲೀಸರು ಹರ ಸಾಹಸ ಪಡಬೇಕಾಯಿತು. 10ಕ್ಕೂ ಹೆಚ್ಚು ಪೊಲೀಸರು ಕಲ್ಲೇಟಿನಿಂದ ಗಾಯಗೊಂಡಿದ್ದಾರೆ.
ಗಾಯಗೊಂಡ ಪೊಲೀಸರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಪ್ರಕರಣ ಸಂಬಂಧ ಉನ್ನತ ಮಟ್ಟದ ತನಿಖೆೆಗೆ ಆದೇಶ ನೀಡಲಾಗಿದೆ. ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದರು