newsics.com
ಲಕ್ನೋ: ಹಿಂಸಾಚಾರದಿಂದ ತತ್ತರಿಸಿರುವ ಉತ್ತರಪ್ರದೇಶದ ಲಖಿಂಪುರಕ್ಕೆ ಭೇಟಿ ನೀಡಲು ರಾಹುಲ್ ಗಾಂಧಿಗೆ ಅನುಮತಿ ನಿರಾಕರಿಸಲಾಗಿದೆ.
ಲಖಿಂಪುರದಲ್ಲಿ ನಿಷೇದಾಜ್ಞೆ ಜಾರಿಯಲ್ಲಿದೆ. ಕಾನೂನು ಮತ್ತು ಸುವ್ಯವಸ್ಥೆ ಪಾಲನೆಗೆ ಭೇಟಿಯಿಂದ ಅಡ್ಡಿಯಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಭೇಟಿಗೆ ಅನುಮತಿ ನೀಡಲು ಸಾಧ್ಯ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ರೈತರ ಪ್ರತಿಭಟನೆ ವೇಳೆ ಕಾರು ಹರಿದ ಪರಿಣಾಮ ನಾಲ್ವರು ರೈತರು ಮೃತಪಟ್ಟಿದ್ದರು. ಹಿಂಸಾಚಾರದಲ್ಲಿ 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.