newsics.com
ಲಕ್ನೋ: ಕೊನೆಗೂ ಉತ್ತರಪ್ರದೇಶ ಸರ್ಕಾರ ಲಖೀಂಪುರಕ್ಕೆ ಭೇಟಿ ನೀಡಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಅನುಮತಿ ನೀಡಿದೆ.
ರಾಹುಲ್ ಗಾಂಧಿ ಮತ್ತು ಇತರ ನಾಲ್ಕು ಮಂದಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರ ಕುಟಂಬ ಸದಸ್ಯರನ್ನು ಭೇಟಿ ಮಾಡಲಿದ್ದಾರೆ. ರಾಹುಲ್ ಗಾಂಧಿ ಲಕ್ನೋ ತಲುಪಿದ್ದಾರೆ.
ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಗೆ ಕೂಡ ಲಖೀಂಪುರಕ್ಕೆ ತೆರಳಲು ಅವಕಾಶ ಕಲ್ಪಿಸಲಾಗಿದೆ.
ರಾಹುಲ್ ಗಾಂಧಿ ಮತ್ತು ಇತರ ಕಾಂಗ್ರೆಸ್ ನಾಯಕರ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ