ಲಖನೌ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಮುಂಬೈ ಮೂಲದ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಈ ಪಿಐಎಲ್ ಸಲ್ಲಿಸಿದ್ದರು. ‘ಭೂಮಿ ಪೂಜೆ’ ಕೇಂದ್ರ ಸರ್ಕಾರ ಸೂಚಿಸಿರುವ ಕೋವಿಡ್ -19 ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಸಾಕೇತ್ ಅವರು ತಮ್ಮ ಅರ್ಜಿಯಲ್ಲಿ ಹೇಳಿದ್ದರು.
ಆದರೆ ಈ ಅರ್ಜಿ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್, ಸಂಘಟಕರು ಮತ್ತು ಉತ್ತರ ಪ್ರದೇಶ ಸರ್ಕಾರವು ಸಾಮಾಜಿಕ ಮತ್ತು ದೈಹಿಕ ದೂರಕ್ಕೆ ಅನ್ವಯವಾಗುವ ಪ್ರೋಟೋಕಾಲ್’ಗಳನ್ನು ಅನುಸರಿಸುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ. ಹೀಗಾಗಿ ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ನಮಗೆ ಯಾವುದೇ ಕಾರಣವಿಲ್ಲ. ಹೀಗಾಗಿ ರಿಟ್ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ಕೋರ್ಟ್ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸಿರುವ ಈ ಕಾರ್ಯಕ್ರಮವು ಆಗಸ್ಟ್ 5 ರಂದು ನಡೆಯಲಿದ್ದು ಇದನ್ನು ತಡೆಯುವಂತೆ ಸಾಕೇತ್ ನ್ಯಾಯಾಲಯವನ್ನು ಕೋರಿದ್ದರು.
ರಾಮಮಂದಿರ ನಿರ್ಮಾಣ ಶಿಲಾನ್ಯಾಸ ಕಾರ್ಯಕ್ರಮ ತಡೆ ಕೋರಿದ್ದ ಅರ್ಜಿ ವಜಾ
Follow Us