ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ

newsics.com ಕೊಯಮತ್ತೂರು: ತಮಿಳುನಾಡಿನಲ್ಲಿ   ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್​​​ ಎಸೆಯಲಾಗಿದೆ. ಕೊಯಮತ್ತೂರಿನಲ್ಲಿ ಈ ಘಟನೆ ನಡೆದಿದೆ. ಪೆಟ್ರೋಲ್ ಬಾಂಬ್ ದಾಳಿಯಲ್ಲಿ  ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಎನ್​ಐಎ ಅಧಿಕಾರಿಗಳು ತಮಿಳುನಾಡಿನಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಈ ಘಟನೆ ನಡೆದಿದೆ.   ಗುರುವಾರ  ಎನ್ ಐ ಎ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಿತ್ತು. ಅನೇಕ ಕಾರ್ಯಕರ್ತರ ಬಂಧನ ಮಾಡಿತ್ತು. ಘಟನೆ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಕಚೇರಿಗಳ ಭದ್ರತೆ ಹೆಚ್ಚಿಸಲಾಗಿದೆ