ಕೋಯಿಕ್ಕೋಡ್: ಕೇರಳದ ಕರಿಪುರಂ ವಿಮಾನ ನಿಲ್ದಾಣದಲ್ಲಿ ಅಪಘಾತಕ್ಕೊಳಗಾದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಇನ್ನೊಬ್ಬರಿಗೆ ಕೊರೋನಾ ಇರುವುದು ದೃಢಪಟ್ಟಿದೆ. ದುಬೈನಿಂದ ಬಂದ ಪ್ರಯಾಣಿಕರಲ್ಲಿ ಇಬ್ಬರಿಗೆ ಕೊರೋನಾ ಇರುವುದು ದೃಢಪಟ್ಟಿದೆ. ಇಬ್ಬರಲ್ಲಿ ಓರ್ವ 45 ವರ್ಷದ ಸುಧೀರ್ ಎಂಬುವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ರಾಂಚಿಯಲ್ಲಿ ಏರ್ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ
ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) 50 ಸಿಬ್ಬಂದಿಗೆ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ. ಎಲ್ಲರಿಗೂ ಕೊರೊನಾ ಪರೀಕ್ಷೆ ನಡೆಯುತ್ತಿದೆ. ಪ್ರಯಾಣಿಕರನ್ನು ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೋನಾ ಪ್ರೋಟೋಕಾಲ್ ಅಡಿಯಲ್ಲಿ ಶವಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
ವಿಮಾನದಲ್ಲಿ 10 ನವಜಾತ ಶಿಶುಗಳು, ಇಬ್ಬರು ಪೈಲಟ್ ಸೇರಿದಂತೆ 184 ಮಂದಿ ಪ್ರಯಾಣ ಬೆಳೆಸಿದ್ದರು. ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. 14 ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.
ವಿಮಾನ ದುರಂತ: ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ