newsics.com
ನವದೆಹಲಿ: ರಾಜ್ಯದ ಚಿಕ್ಕಬಳ್ಳಾಪುರದ ಹಿರೇನಾಗವೇಲಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟ ದುರಂತ ಕುರಿತು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.
ದುರಂತದಲ್ಲಿ ಪ್ರಾಣ ಹಾನಿ ಸಂಭವಿಸಿರುವುದಕ್ಕೆ ತೀವ್ರ ನೋವಾಗಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ನರೇಂದ್ರ ಮೋದಿ ಆಶಾವಾದ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ದುರಂತ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಜಿಲೆಟಿನ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೆ ಏರಿದೆ. ಘಟನಾ ಸ್ಥಳದಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ