ನವದೆಹಲಿ: ಉತ್ತರ ಭಾರತದಲ್ಲಿ ಅದರಲ್ಲೂ ಮುಖ್ಯವಾಗಿ ಪಂಜಾಬ್ ಮತ್ತು ಹರ್ಯಾಣದಲ್ಲಿ ರೈತರ ಪ್ರತಿಭಟನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅನ್ನದಾತರ ಮನವೊಲಿಕೆ ಕಸರತ್ತು ಆರಂಭಿಸಿದೆ. ಇಂದು ಬಿಹಾರದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ ಮುಖ್ಯವಾಗಿ ಕೃಷಿ ಕ್ಷೇತ್ರದ ಬಗ್ಗೆ ಪ್ರಸ್ತಾಪಿಸಿದರು.
ರೈತರಿಗೆ ಮಾರಕವಾಗುವಂತಹ ಯಾವುದೇ ನಿರ್ಧಾರ ಸರ್ಕಾರ ತೆಗೆದುಕೊಂಡಿಲ್ಲ ಎಂದು ಪ್ರಧಾನಿ ಸ್ಪಷ್ಟಪಡಿಸಿದರು. ರಾಜ್ಯಸಭೆಯಲ್ಲಿ ಅಂಗೀಕರಿಸಲಾದ ಕೃಷಿ ಮಸೂದೆ ರೈತರ ಕಲ್ಯಾಣಕ್ಕೆ ಪೂರಕವಾಗಿದೆ ಎಂದು ಪ್ರಧಾನಿ ಹೇಳಿದರು. ಕೃಷಿ ಉತ್ಪನ್ನ ಮಾರುಕಟ್ಟೆ ಎಂದಿನಂತೆ ಮುಂದುವರಿಯಲಿದೆ. ಕೃಷಿ ಉತ್ಪನ್ನಗಳ ಕನಿಷ್ಟ ಬೆಂಬಲ ಬೆಲೆ ಪದ್ದತಿ ಕೂಡ ಇರಲಿದೆ ಎಂದು ಪ್ರಧಾನಿ ಹೇಳಿದರು.
ಕೃಷಿ ಕ್ಷೇತ್ರದಲ್ಲಿ ಬದಲಾವಣೆ ಕಾಲದ ಅಗತ್ಯವಾಗಿದ್ದು ಇದಕ್ಕೆ ತಕ್ಕಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಧಾನಿ ವಿವರಿಸಿದರು. ರೈತರು ತಮ್ಮ ಉತ್ಪನ್ನಗಳನ್ನು ಯಾರಿಗೂ ಬೇಕಾದರೂ ಮಾರಾಟ ಮಾಡಲು ಇದೀಗ ಶಕ್ತರಾಗಿದ್ದಾರೆ. ಇದರಿಂದ ಆದಾಯ ಹೆಚ್ಚಾಗಲಿದೆ ಹೊರತೂ ಕಡಿಮೆಯಾಗದು ಎಂದು ಪ್ರಧಾನಿ ಭರವಸೆ ನೀಡಿದರು.