Monday, September 27, 2021

ಇ-ರುಪಿ ಡಿಜಿಟಲ್ ಸೇವೆಗೆ ಪ್ರಧಾನಿ ಮೋದಿ ಚಾಲನೆ

Follow Us

newsics.com
ನವದೆಹಲಿ: ಡಿಜಿಟಲ್ ಮೂಲಕ ಹಣ ಪಾವತಿ ಮಾಡುವ ಇ-ರುಪಿ ಸೇವೆಗೆ ಇಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ.
ಇದರಿಂದ ನಗದುರಹಿತ ಹಾಗೂ ಮಧ್ಯವರ್ತಿಗಳ ನೆರವಿಲ್ಲದೆ ಡಿಜಿಟಲ್ ಪಾವತಿ ಮಾಡಬಹುದಾಗಿದೆ. ಆರಂಭಿಕವಾಗಿ ಈ ಸೇವೆ ಆರೋಗ್ಯಕ್ಕೆ ಸಂಬಂಧಿಸಿದ ಹಣ ಪಾವತಿಗೆ ಅನುಕೂಲವಾಗಲಿದೆ.
ಸ್ಮಾರ್ಟ್​ಫೋನ್, ಇಂಟರ್ ನೆಟ್, ನೆಟ್  ಬ್ಯಾಂಕಿಂಗ್ ಇಲ್ಲದವರು ಕೂಡ  ಎಸ್​ಎಂಎಸ್ ಅಥವಾ ಕ್ಯೂ ಆರ್ ಕೋಡ್ ಬಳಕೆ ಮಾಡಿ ಹಣವನ್ನು ಪಾವತಿ ಮಾಡುವ ಆಯ್ಕೆ ಇದರಲ್ಲಿದ್ದು, ಇದು ಇ-ವೋಚರ್ ಆಧಾರಿತವಾಗಿ ಕಾರ್ಯ ನಿರ್ವಹಿಸಲಿದೆ. ಇದನ್ನು ನ್ಯಾಷನಲ್ ಪೇಮೆಂಟ್ಸ್​ ಕಾರ್ಪೋರೇಷನ್ ಆಫ್ ಇಂಡಿಯಾ ಅಭಿವೃದ್ಧಿಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

 

ಬಂಧಿತ ಆಫ್ರಿಕನ್ ಪ್ರಜೆ ಸಾವು: ವಿದೇಶಿಗರ ಪ್ರತಿಭಟನೆ, ಪೊಲೀಸರಿಂದ ಲಾಠಿ ಚಾರ್ಜ್

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!