newsics.com
ಜಮ್ಮು ಕಾಶ್ಮೀರ: ಜೂ 24ರಂದು ಜಮ್ಮು-ಕಾಶ್ಮೀರದ ಎಲ್ಲಾ 14 ಪ್ರಾದೇಶಿಕ ಪಕ್ಷಗಳೊಂದಿಗೆ ಪ್ರಧಾನಿ ಮೋದಿ ಸಭೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್ಟಿಕಲ್ 370ನೇ ತೆಗೆದು ಹಾಕಿದ ನಂತರ ನಡೆಯುತ್ತಿರುವ ಮೊದಲ ಸರ್ವಪಕ್ಷ ಸಭೆ ಇದಾಗಿದೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಸೇರಿದಂತೆ ರಾಜಕೀಯ ಪ್ರಕ್ರಿಯೆ ಚುರುಕುಗೊಳಿಸುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸರ್ವ ಪಕ್ಷ ಸಭೆ ನಡೆಯುವ ಸಾಧ್ಯತೆ ಇದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರೆ ಹಲವು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಜೂ.24ರಂದು ಜಮ್ಮು ಕಾಶ್ಮೀರದಲ್ಲಿ ಪ್ರಧಾನಿ ಮೋದಿ ಜತೆ ಪ್ರಾದೇಶಿಕ ಪಕ್ಷಗಳ ಸಭೆ
Follow Us