ಕೋಲ್ಕತ್ತಾ: ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಶನಿವಾರ ಕೋಲ್ಕತ್ತಾಕ್ಕೆ ಆಗಮಿಸಲಿದ್ದಾರೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಕೋಲ್ಕತ್ತಾ ಸೇರಿದಂತೆ ಮೋದಿ ಭೇಟಿ ನೀಡಲಿರುವ ಎಲ್ಲ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಪೌರತ್ವ ಕಾನೂನು ತಿದ್ದುಪಡಿ ವಿರೋಧಿ ಹೋರಾಟ ತೀವ್ರವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ.