ನವದೆಹಲಿ: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ. ಭಾರತೀಯ ಕಾಲಮಾನ ಸಂಜೆ 6.30ಕ್ಕೆ ವೀಡಿಯೋ ಸಂವಾದದ ಮೂಲಕ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶುಕ್ರವಾರ ಸಾಮಾನ್ಯ ಸಭೆ ಉದ್ದೇಶಿಸಿ ಮಾತನಾಡಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಕಾಶ್ಮೀರ ವಿವಾದ ಬಗ್ಗೆ ಪ್ರಸ್ತಾಪಿಸಿದ್ದರು. ಇದನ್ನು ಪ್ರತಿಭಟಿಸಿ ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ಅದನ್ನು ಬಹಿಷ್ಕರಿಸಿದ್ದರು. ಇಂದು ಪಾಕ್ ಪ್ರಧಾನಿ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಪ್ರತ್ಯುತ್ತರ ನೀಡಲಿದ್ದಾರೆ.
ಕಾಶ್ಮೀರ ದೇಶದ ಅವಿಭಾಜ್ಯ ಅಂಗವಾಗಿದ್ದು, ಇದರಲ್ಲಿ ಹಸ್ತಕ್ಷೇಪ ನಡೆಸುವ ಯಾವುದೇ ಅಧಿಕಾರ ಪಾಕಿಸ್ತಾನಕ್ಕೆ ಇಲ್ಲ ಎಂದು ಭಾರತ ಪುನರುಚ್ಚರಿಸಿದೆ.