ನವದೆಹಲಿ: ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ, ಗಣರಾಜ್ಯೋತ್ಸವ ದಿನದಂದು ರಾಷ್ಟ್ರೀಯ ಯುದ್ದ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ನಮನ ಸಲ್ಲಿಸಲಿದ್ದಾರೆ. ಸೇನೆಯ ಮೂರು ಪಡೆಗಳ ಮುಖ್ಯಸ್ಥರು ಪ್ರಧಾನಿ ಮೋದಿ ಅವರನ್ನು ಈ ಸಂದರ್ಭದಲ್ಲಿ ಸ್ವಾಗತಿಸಲಿದ್ದಾರೆ. ಗಣರಾಜ್ಯೋತ್ಸವದಂದು ಯುದ್ದ ಸ್ಮಾರಕಕ್ಕೆ ಪ್ರಧಾನಿ ಭೇಟಿ ನೀಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ