Saturday, April 17, 2021

ಜಯಾ ನಿವಾಸವನ್ನು ಸಿಎಂ ಗೃಹ ಕಚೇರಿಯಾಗಿ ಬಳಸಬಹುದಲ್ಲವೇ – ಹೈಕೋರ್ಟ್ ಸಲಹೆ

ಚೆನ್ನೈ:  ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರ ಪೋಯಸ್ ಗಾರ್ಡ್ ನ ನಿವಾಸವನ್ನು ಸ್ಮಾರಕವಾಗಿ ಪರಿವರ್ತಿಸುವುದರ ಬದಲಾಗಿ ರಚನಾತ್ಮಕ ಉದ್ದೇಶಕ್ಕೆ ಬಳಸುವ ಬಗ್ಗೆ ಪರಿಶೀಲಿಸುವಂತೆ ಮದ್ರಾಸ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ನ್ಯಾಯಮೂರ್ತಿ  ಅಬ್ದುಲ್ ಖುರ್ದೋಸ್ ಸದಸ್ಯರಾಗಿರುವ ಪೀಠ ಈ ಸಲಹೆ ನೀಡಿದೆ. ಸ್ಮಾರಕವಾಗಿ ಪರಿವರ್ತಿಸಿದರೆ ಅದಕ್ಕೆ ಸಾಕಷ್ಟು ಹಣ ವೆಚ್ಚ ಮಾಡಬೇಕಾಗುತ್ತದೆ. ಇಧರಿಂದ ಸರ್ಕಾರಕ್ಕೆ ಆರ್ಥಿಕ ಹೊರೆ ಬೀಳಲಿದೆ. ಇದೇ ವೇಳೆ ಅದನ್ನು ತಮಿಳುನಾಡು ಸಿಎಂ ಅವರ ಅಧಿಕೃತ ನಿವಾಸ ಮತ್ತು ಗೃಹ ಕಚೇರಿಯಾಗಿ ಬಳಸಿದರೆ ಅದರ ಸದುಪಯೋಗ ಸಾಧ್ಯವಿದೆ ಎಂಬ ಅಭಿಪ್ರಾಯ ಇದೆ. ಈ ಬಗ್ಗೆ ಪರಿಶೀಲಿಸಿ ಪ್ರತ್ಯುತ್ತರ ನೀಡಿ ಎಂದು ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಹೈಕೋರ್ಟ್  ಎಂಟು ವಾರಗಳಿಗೆ ಮುಂದೂಡಿದೆ, ಜಯಾ ನಿವಾಸವನ್ನು ವಶಕ್ಕೆ ತೆಗೆದುಕೊಳ್ಳುವ ಮೊದಲು ರಾಜ್ಯ ಸರ್ಕಾರ ಜಯಲಲಿತಾ ಅವರ ಉತ್ತರಾಧಿಕಾರಿ ಬಳಿ ಚರ್ಚೆ ನಡೆಸಬೇಕು ಮತ್ತು ಅವರಿಗೆ ಸೂಕ್ತ ಪರಿಹಾರ ಕೂಡ ನೀಡಬೇಕು ಎಂದು ನ್ಯಾಯಪೀಠ ಸೂಚಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!