ನವದೆಹಲಿ: ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ವಿರೋಧಿಸಿ ದೆಹಲಿಯ ಶಾಹೀನ್ ಭಾಗ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರು ಹಮ್ಮಿಕೊಂಡಿರುವ ಗೃಹ ಸಚಿವ ಅಮಿತ್ ಶಾ ನಿವಾಸದತ್ತ ಮೆರವಣಿಗೆಗೆ ಅನುಮತಿ ನಿರಾಕರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದೇ ವೇಳೆ, ಚೆನ್ನೈ ನಲ್ಲಿ ಕೂಡ ರಾಷ್ಟ್ರೀಯ ಪೌರತ್ವ ತಿದ್ದುಪಡಿ ವಿರೋಧಿ ಹೋರಾಟ ತೀವ್ರಗೊಂಡಿದ್ದು, ಭದ್ರತಾ ವ್ಯವಸ್ಥೆ ಬಲಪಡಿಸಲಾಗಿದೆ.