ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಯುವ ವೈದ್ಯರೊಬ್ಬರ ಆತ್ಮಹತ್ಯೆ ಕುರಿತು ತನಿಖೆಗೆ ಆದೇಶ ನೀಡಲಾಗಿದೆ. ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ಮಗು ಸಾವನ್ನಪ್ಪಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಇದರಿಂದ ಮನನೊಂದ ವೈದ್ಯ ಅನೂಪ್ ಆತ್ಮಹತ್ಯೆಗೆ ಶರಣಾಗಿದ್ದರು.
ಇದೀಗ ಅನೂಪ್ ಕುರಿತಂತೆ ಟೀಕೆ ಮಾಡಿದವರು ಮತ್ತು ಅವರ ಮೊಬೈಲ್ ಗೆ ಸಂದೇಶ ಕಳುಹಿಸಿದವರ ಕುರಿತು ತನಿಖೆ ನಡೆಸಲು ಪೊಲೀಸರು ನಿರ್ಧರಿಸಿದ್ದಾರೆ. ಅನೂಪ್ ಮತ್ತು ಅವರ ಪತ್ನಿಯ ಮೊಬೈಲ್ ಗೆ ಸಂದೇಶ ರವಾನಿಸಿದವರ ಕುರಿತು ಮಾಹಿತಿ ಸಂಗ್ರಹಿಸಿ ಸೂಕ್ತ ಕ್ರಮ ತೆಗೆದುಕೊಳ್ಳಲು ಪೊಲೀಸರು ನಿರ್ಧರಿಸಿದ್ದಾರೆ.
ಏಳು ವರ್ಷದ ಮಗುವಿನ ಶಸ್ತ್ರ ಚಿಕಿತ್ಸೆ ಇತ್ತೀಚೆಗೆ ನಡೆದಿತ್ತು. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗದೆ ಮಗು ಸಾವನ್ನಪ್ಪಿತ್ತು.