newsics.com
ನವದೆಹಲಿ: ಕ್ರಿಮಿನಲ್ ಗಳ ರಾಜಕೀಯ ಪ್ರವೇಶ ತಡೆಗಟ್ಟುವ ಸಂಬಂಧ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ.
ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ 48 ಗಂಟೆಗಳ ಒಳಗೆ ಅವರ ಕ್ರಿಮಿನಲ್ ಹಿನ್ನೆಲೆಯ ಸಮಗ್ರ ಮಾಹಿತಿ ಸಲ್ಲಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.
ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ ಆದೇಶಳನ್ನು ಪಾಲಿಸಲು ರಾಜಕೀಯ ಪಕ್ಷಗಳು ವಿಫಲವಾಗಿವೆ ಎಂದು ಅರ್ಜಿದಾರರು ಆರೋಪಿಸಿದ್ದರು. ಆದೇಶ ಪಾಲಿಸಲು ವಿಫಲವಾದ ಪಕ್ಷಗಳ ಚಿಹ್ನೆ ಅಮಾನತುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.