newsics.com
ನವದೆಹಲಿ: ಅಶ್ಲೀಲ ಚಿತ್ರ ನಿರ್ಮಾಣದ ಆರೋಪ ಎದುರಿಸುತ್ತಿರುವ ನಟಿ ಪೂನಂ ಪಾಂಡೆಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಮುಂದಿನ ಆದೇಶದ ತನಕ ಬಂಧಿಸದಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಯಾವುದೇ ರೀತಿಯ ಬೆದರಿಕೆ ಒಡ್ಡಬಾರದು ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ.
ಈ ಹಿಂದೆ ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಳ್ಳಿಹಾಕಿತ್ತು. ಬಳಿಕ ನಟಿ ಪೂನಂ ಪಾಂಡೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.