Tuesday, April 13, 2021

ಕಾರ್ಖಾನೆಯಿಂದ ವಿಷಾನಿಲ ಸೋರಿಕೆ: ಮೂರು ಮಂದಿ ಬಲಿ

ವಿಶಾಖಪಟ್ಟಣಂ: ಕಾರ್ಖಾನೆಯಿಂದ ವಿಷಾನಿಲ ಸೋರಿಕೆಯಾದ ಪರಿಣಾಮ ಮಗು ಸಹಿತ ಮೂರು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಸಮೀಪದ ಆರ್ ಆರ್ ವೆಂಕಟಪುರಂ ಎಂಬಲ್ಲಿ ಈ ದುರಂತ ಸಂಭವಿಸಿದೆ.  ವಿಷಾನಿಲ ಸೋರಿಕೆಯಾದ ಕೂಡಲೇ ಸ್ಥಳೀಯ ನಿವಾಸಿಗಳಲ್ಲಿ ಉಸಿರಾಟದ ಸಮಸ್ಯೆ ಎದುರಾಯಿತು. ಕೆಲವರು ತೀವ್ರ ಅಸ್ವಸ್ಥರಾದರು. ಕೂಡಲೇ  ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಹಿತ ಮೂರು ಮಂದಿ ಮೃತಪಟ್ಟಿದ್ದಾರೆ. 80ಕ್ಕೂ ಹೆಚ್ಚು ಮಂದಿಗೆ ಆರೋಗ್ಯ ಸಮಸ್ಯೆ ಎದುರಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಇಂದು ಮುಂಜಾನೆ  4 ಗಂಟೆ ಹೊತ್ತಿಗೆ  ಅನಿಲ ಸೋರಿಕೆ ಸಂಭವಿಸಿದೆ. ಇವರಲ್ಲಿ ಕೆಲವರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಹಲವು ಮಂದಿ  ವಿಷಾನಿಲ ಸೋರಿಕೆಯಿಂದಾಗಿ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದಿದ್ದಾರೆ ಎಂದು ವರದಿಯಾಗಿದೆ.  ವಿಷಾನಿಲ ಸೋರಿಕೆಯಾದ  ಪಾಲಿಮರ್ ಕಾರ್ಖಾನೆಯ ಐದು ಕಿಲೋ ಮೀಟರ್ ವ್ಯಾಪ್ತಿವರೆಗೆ ವಿಷಾನಿಲ ವ್ಯಾಪಿಸಿದೆ ಎಂದು ಮೂಲಗಳು ತಿಳಿಸಿವೆ. ಇದರಿಂದ ಸಾವಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!