Sunday, May 29, 2022

ನಟಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿ ಸೆ.29ಕ್ಕೆ ಮುಂದೂಡಿಕೆ

Follow Us

newsics.com
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಿಯಾ ಚಕ್ರವರ್ತಿ ಮತ್ತು ಅವರ ಸಹೋದರ ಶೋಯಿಕ್ ಅವರ ಜಾಮೀನು ಅರ್ಜಿಗಳನ್ನು ಮುಂದಿನ ಮಂಗಳವಾರ ವಿಚಾರಣೆ ನಡೆಸಲಾಗುವುದು ಎಂದು ಬಾಂಬೆ ಹೈಕೋರ್ಟ್ ಗುರುವಾರ (ಸೆ.24) ತಿಳಿಸಿದೆ.
ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ನಿಯಂತ್ರಣ ದಳ (ಎನ್ ಸಿಬಿ) ಸೆ.8ರಂದು ಬಂಧಿಸಿತ್ತು. ಇದಕ್ಕೂ ಮುನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋಯಿಕ್ ಚಕ್ರವರ್ತಿ ಈಗ ಬಾಂಬೆ ಹೈಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಸುಶಾಂತ್ ಸಿಂಗ್ ರಜಪೂತ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಅಕ್ಟೋಬರ್ 6ರವರೆಗೆ ವಿಸ್ತರಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

newsics.com ಬೆಂಗಳೂರು: ಹಿರಿಯ ನಟ, ಮುಖ್ಯಮಂತ್ರಿ ಚಂದ್ರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜನಸೇವೆ ಮಾಡುವ...

ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಮಾತು

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು 89 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ 11 ಗಂಟೆಗೆ ಮಾತನಾಡಲಿದ್ದಾರೆ. 88 ನೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಹಿಂದಿನ ಪ್ರಧಾನಿಗಳು ದೇಶಕ್ಕಾಗಿ ಮಾಡಿದ ಸೇವೆಯನ್ನು...

ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ಬಳಿಕ ಸ್ಮರಣ ಶಕ್ತಿಯನ್ನೇ ಕಳೆದು ಕೊಂಡ ಪತಿ!

newsics.com ಐರಿಷ್ : ಪತ್ನಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ 10 ನಿಮಿಷದ ಬಳಿಕ ವ್ಯಕ್ತಿಯು ನೆನಪಿನ ಶಕ್ತಿ ಕಳೆದುಕೊಂಡ ವಿಚಿತ್ರ ಘಟನೆಯು ಐರಿಷ್ ನಲ್ಲಿ ನಡೆದಿದೆ. ಇದೊಂದು ಅಲ್ಪಾವಧಿ ಸ್ಮರಣ ಶಕ್ತಿ ಸಮಸ್ಯೆಯಾಗಿದ್ದು ವೈದ್ಯಕೀಯ ಭಾಷೆಯಲ್ಲಿ...
- Advertisement -
error: Content is protected !!