newsics.com
ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಇದರ ಜೊತೆಗೆ ಈಗಾಗಲೇ ಶಿಕ್ಷೆಯ ಅವಧಿ ಪೂರೈಸಿ, ದಂಡ ಮೊತ್ತ ಪಾವತಿಸಲಾಗದೆ ಜೈಲಿನಲ್ಲಿರುವ ಬಡ ಖೈದಿಗಳ ದಂಡ ಮೊತ್ತವನ್ನು ಸಂಪೂರ್ಣವಾಗಿ ಮನ್ನಾ ಮಾಡಲೂ ನಿರ್ಧರಿಸಲಾಗಿದೆ.
ಉಗ್ರ ಕೃತ್ಯ,ಅತ್ಯಾಚಾರ, ವರದಕ್ಷಿಣೆ ಕಿರುಕುಳ,ಮಾನವ ಕಳ್ಳಸಾಗಾಣೆ,ಮರಣದಂಡನೆ ಹಾಗೂ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಖೈದಿಗಳಿಗೆ ಈ ಯೋಜನೆ ಅನ್ವಯವಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.