Saturday, April 17, 2021

ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ಏರ್’ಲಿಫ್ಟ್’ಗೆ ಸಿದ್ಧತೆ

ನವದೆಹಲಿ: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮತ್ತೆ ಕೇಂದ್ರ ಸರ್ಕಾರ ಮುಂದಾಗಿದೆ.
ಮೇ 7ರಿಂದ ಹಂತ ಹಂತವಾಗಿ ಭಾರತೀಯರನ್ನು ದೇಶಕ್ಕೆ ವಾಪಸ್ ಕರೆತರುವ ಕಾರ್ಯಾಚರಣೆ ನಡೆಸಲಿದೆ. ಲಕ್ಷಾಂತರ ಜನರು ಭಾರತಕ್ಕೆ ವಾಪಸ್ ಬರುವ ನಿರೀಕ್ಷೆ ಇದೆ.
ಗಲ್ಫ್ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರು ತವರಿಗೆ ಮರಳಲು ತವಕಿಸುತ್ತಿದ್ದು, ಇದೀಗ ಇವರನ್ನು ಭಾರತಕ್ಕೆ ವಾಪಸ್ ಕರೆತರಲು ಕೇಂದ್ರ ಸರ್ಕಾರ ಬೃಹತ್ ಯೋಜನೆ ಸಿದ್ಧಪಡಿಸುತ್ತಿದೆ. ಈ ಹಿಂದೆ ಚೀನಾ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಕರೆತರಲಾಗಿದ್ದ ಭಾರತೀಯರಿಗೆ ಉಚಿತ ವಿಮಾನ ಪ್ರಯಾಣ ಸೇವೆ ನೀಡಲಾಗಿತ್ತು. ಆದರೆ ಈಗ ನಡೆಯುತ್ತಿರುವ ಕಾರ್ಯಾಚರಣೆ ಉಚಿತವಲ್ಲ.
ವಿಮಾನ ಹತ್ತುವ ಮುನ್ನ ಪ್ರತಿಯೊಬ್ಬರ ವೈದ್ಯಕೀಯ ತಪಾಸಣೆ ನಡೆಯಲಿದೆ. ರೋಗ ಲಕ್ಷಣಗಳಿಲ್ಲದವರಿಗೆ ಮಾತ್ರ ಪ್ರಯಾಣದ ಅವಕಾಶ ಇರಲಿದೆ. ಭಾರತಕ್ಕೆ ಮರಳಿದ ಬಳಿಕ ಎಲ್ಲರೂ ಆರೋಗ್ಯ ಸೇತು ಆಯಪ್​ನಲ್ಲಿ ತಮ್ಮನ್ನು ನೊಂದಾಯಿಸಿಕೊಳ್ಳಬೇಕು. ಇಲ್ಲಿಯೂ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ನಡೆಯಲಿದೆ. ನಂತರ ಅವರಿರುವ ರಾಜ್ಯದಲ್ಲಿ ಅವರನ್ನೆಲ್ಲಾ 14 ದಿನಗಳ ಕಾಲ ಕ್ವಾರಂಟೈನ್​ನಲ್ಲಿಡಲಾಗುತ್ತದೆ.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!