newsics.com
ನವದೆಹಲಿ: ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಭಾರತೀಯ ಕ್ರೀಡಾಪಟುಗಳೊಂದಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಚಹಾ ಕೂಟದಲ್ಲಿ ಇಂದು ಭಾಗಿಯಾದರು.
ಅಥ್ಲೀಟ್ಸ್ಗಳ ಸಾಧನೆ ಯುವ ಪೀಳಿಗೆಗೆ ಸ್ಪೂರ್ತಿಯಾಗಿದ್ದು, ಮುಂದಿನ ದಿನಗಳಲ್ಲಿ ಅನೇಕರಿಗೆ ಕ್ರೀಡಾಪಟುಗಳಾಗಿ ಹೊರಹೊಮ್ಮಲು ದಾರಿದೀಪವಾಗಲಿದೆ ಎಂದರು.
ಈ ವೇಳೆ ಅವರು ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮವಾಗಿ ಪ್ರದರ್ಶನ ನೀಡಿದ್ದಾರೆ. ಅವರು ನಮ್ಮ ದೇಶದ ಹೆಮ್ಮೆ. ಈ ಬಾರಿ ಭಾರತಕ್ಕೆ ಅತಿ ಹೆಚ್ಚು ಪದಕವನ್ನು ಗೆದ್ದುಕೊಟ್ಟಿದ್ದಾರೆ ಎಂದು ಕ್ರೀಡಾಪಟುಗಳನ್ನು ಶ್ಲಾಘಿಸಿದರು.