Monday, April 12, 2021

ದೇಗುಲ ಆರಂಭಿಸುವ ಸರ್ಕಾರದ ನಿರ್ಧಾರಕ್ಕೆ ಅರ್ಚಕರ ವಿರೋಧ

ಶಬರಿಮಲೆ: ಕೊರೋನಾ ಆತಂಕದ ನಡುವೆಯೇ ದೇವಾಲಯಗಳು ಜನರ ಭೇಟಿಗೆ ಮುಕ್ತವಾಗುತ್ತಿವೆ. ಹೀಗಾಗಿ ಕೇರಳ ಸರ್ಕಾರ ಕೂಡ ಜೂನ್ 14 ರಿಂದ ಶಬರಿಮಲೆ ದೇವಾಲಯ ಬಾಗಿಲು ತೆರೆಯಲು ನಿರ್ಧರಿಸಿತ್ತು. ಆದರೆ, ಈಗ ದೇವಾಲಯದ ಪ್ರಧಾನ ಅರ್ಚಕರು ಸರ್ಕಾರದ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇವಾಲಯದ ಪ್ರಧಾನ ಅರ್ಚಕರಾದ ಕಂಡರರ್ ಮಹೇಶ್ ಮೋಹನರ್ ಸರ್ಕಾರದ ನಿರ್ಧಾರ ವಿರೋಧಿಸಿದ್ದು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹೀಗಾಗಿ ದೇವಾಲಯವನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಅದೇಶವನ್ನು ಹಿಂಪಡೆಯಬೇಕೆಂದು ಅವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಕಂಡರರ್ ಮಹೇಶ್, ತಿರುವಾಂಕೂರ್ ದೇವಸ್ವಂ ಮಂಡಳಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇರಳ ಸರ್ಕಾರ, ಜನರ ಭಾವನೆಗಳನ್ನು ಗೌರವಿಸಿ ಈ ನಿರ್ಧಾರಕ್ಕೆ ಬರಲಾಗಿತ್ತು. ಆದರೆ, ಇದನ್ನು ಅರ್ಚಕರು ವಿರೋಧಿಸಿದ್ದಾರೆ. ಹೀಗಾಗಿ ಇನ್ನೊಮ್ಮೆ ಆಡಳಿತ ಮಂಡಳಿ ಹಾಗೂ ಅರ್ಚಕರ ಜತೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ದೇವಸ್ವಂ ಖಾತೆ ಸಚಿವ ಕಡಕಂಪಳ್ಳಿ ಸುರೇಂದ್ರನ್ ತಿಳಿಸಿದ್ದಾರೆ. ಗುರುವಾಯೂರು ಸೇರಿದಂತೆ ಕೇರಳದ ಬಹುತೇಕ ದೇವಾಲಯಗಳ ಬಾಗಿಲು ತೆರೆದಿದ್ದು ಭಕ್ತರ ಕೊರತೆ ಕಂಡುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!