Tuesday, April 13, 2021

ಸ್ಥಳೀಯ ಉತ್ಪನ್ನಗಳನ್ನು ಜಾಗತಿಕ ಬ್ರಾಂಡ್ ಆಗಿ ಬದಲಾಯಿಸಿ: ಮೋದಿ ಕರೆ

ನವದೆಹಲಿ: ದೇಶವನ್ನು ಉದ್ದೇಶಿಸಿ ಮನ್ ಕಿ ಬಾತ್ ನಲ್ಲಿ  ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮುಖ್ಯವಾಗಿ ಕೊರೋನಾದಿಂದ ಎದುರಾಗಿರುವ  ಪರಿಸ್ಥಿತಿಯನ್ನು ಪ್ರಸ್ತಾಪಿಸಿದರು. ವಲಸೆ ಕಾರ್ಮಿಕರ ಬಗ್ಗೆ ಮಾತನಾಡಿದ ಅವರು ಸರ್ಕಾರ ಕಷ್ಟದ ಸಮಯದಲ್ಲಿ ಅವರ ಜೊತೆ ನಿಲ್ಲಲಿದೆ ಎಂದು ಹೇಳಿದರು. ಕೊರೋನಾ ವಿರುದ್ದ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಭಾರತ  ಸಂಕೀರ್ಣವಾದ ಪರಿಸ್ಥಿತಿ ಎದುರಿಸುತ್ತಿದೆ. ದೇಶದಲ್ಲಿ ಅತೀ ಹೆಚ್ಚು ಜನ ಸಂಖ್ಯೆಯಿದೆ. ಕೆಲವು ದೇಶಗಳಲ್ಲಿ ಜನ ಸಂಖ್ಯೆ ತೀರಾ ಕಡಿಮೆ. ಇದನ್ನೆಲ್ಲ ಗಣನೆಗೆ ತೆಗೆದುಕೊಂಡು ಕಾರ್ಯತಂತ್ರ ರೂಪಿಸಬೇಕು ಎಂದು ಪ್ರಧಾನಿ ಅಭಿಪ್ರಾಯಪಟ್ಟರು. ಯೋಗ ಮತ್ತು ಅಯುರ್ವೇದ ವನ್ನು ಇನ್ನಷ್ಟು ಜನಪ್ರಿಯಗೊಳಿಸಲು ಜನರು ಮುಂದೆ ಬರಬೇಕು ಎಂದು ಕರೆ ನೀಡಿದ  ಪ್ರಧಾನಿ ವಿದೇಶ ರಾಷ್ಟ್ರಗಳಲ್ಲಿ ಈ ಕುರಿತು ಆಸಕ್ತಿ ಹೆಚ್ಚಾಗುತ್ತಿದೆ ಎಂದು ಹೇಳಿದರು. ಸ್ವಾವಲಂಬಿ  ಭಾರತದತ್ತ ನಾವು ಹೆಜ್ಜೆ ಇರಿಸಬೇಕಾಗಿದೆ.  ಪ್ರತಿಯೊಬ್ಬರು ಈ ಮಹಾ ಕಾರ್ಯದಲ್ಲಿ ಕೈ ಜೋ಼ಡಿಸಬೇಕು ಎಂದು ಪ್ರಧಾನಿ ಕರೆ ನೀಡಿದರು. ಪರಿಸರ ಸಂರಕ್ಷಣೆಯ ಮಹತ್ವವನ್ನು ಕೂಡ ಪ್ರಧಾನಿ ಪ್ರತಿಪಾದಿಸಿದರು.  ಪ್ರಕೃತಿಯನ್ನು ಗೌರವಿಸಿ, ಸಂರಕ್ಷಿಸಿ ಜೀವನ ನಡೆಸಬೇಕಾಗಿದೆ ಎಂದು ಪ್ರಧಾನಿ ಕರೆ ನೀಡಿದರು

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!