newsics.com
ಗುಜರಾತ್: ಗಾಂಧೀ ಜಯಂತಿ ಅಂಗವಾಗಿ ದೇಶಾದ್ಯಂತ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛತಾ ಕಾರ್ಯ ಮಾಡಿದರು.
ದೇಶಾದ್ಯಂತ ಸ್ವಚ್ಛತ ಅಭಿಯಾನ ನಡೆಸುವಂತೆ ಕರೆ ನೀಡಿದ್ದ ಮೋದಿ, ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ ಕೇವಲ ನಾವು ಸ್ವಚ್ಛತೆಯ ಬಗ್ಗೆ ಮಾತ್ರ ಗಮನಹರಿಸಿಲ್ಲ, ಸ್ವಚ್ಛ ಹಾಗೂ ಸ್ವಸ್ತ್ ಭಾರತ್ ಗಮನದಲ್ಲಿಟ್ಟುಕೊಂಡು ಫಿಟ್ನೆಟ್ಗೂ ಒತ್ತು ನೀಡಿದ್ದೇವೆ ಎಂದಿದ್ದಾರೆ.
ಪ್ರಧಾನಿ ಮೋದಿಯವರ ಸ್ವಚ್ಛತಾ ಅಭಿಯಾನದಲ್ಲಿ ದೇಶಾದ್ಯಂತ ರಾಜಕೀಯ ನಾಯಕರು ಸಕ್ರಿಯವಾಗಿ ಪಾಲ್ಗೊಂಡರು. ಗುಜರಾತ್ನ ಅಹಮದಾಬಾದಿನಲ್ಲಿ ನಡೆದ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಸ್ವಚ್ಛತೆಗಾಗಿ ಶ್ರಮದಾನ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದರು.
ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ರಾಜಸ್ಥಾನದ ಕೋಟಾದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನದಲ್ಲಿ ಭಾಗವಹಿಸಿದ್ದರು. ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದ ಬಳಿ ನಡೆದ ಸ್ವಚ್ಛತಾ ಅಭಿಯಾನದಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.