ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ಅತ್ಯುಗ್ರ ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಗೆ ಉತ್ತರಿಸಿದ ಪ್ರಧಾನಿ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿಯನ್ನು ಬಲವಾಗಿ ಸಮರ್ಥಿಸಿಕೊಂಡರು. ಪ್ರತಿಪಕ್ಷಗಳು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಿವೆ ಎಂದು ಟೀಕಿಸಿದರು. ಧಾರ್ಮಿಕ ಕಾರಣಗಳಿಗಾಗಿ ನೆರೆಯ ದೇಶಗಳಲ್ಲಿ ದೌರ್ಜನ್ಯಕ್ಕೆ ತುತ್ತಾದವರಿಗೆ ಪೌರತ್ವ ನೀಡುವುದಕ್ಕೆ ಯಾಕೆ ವಿರೋಧ ಎಂದು ಪ್ರಶ್ನಿಸಿದರು. ದೇಶದ ಜನರು ಬದಲಾವಣೆ ಬಯಸುತ್ತಿದ್ದಾರೆ. ಅದಕ್ಕಾಗಿಯೇ ಎರಡನೇ ಬಾರಿ ಬಿಜೆಪಿ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ. ಜಮ್ಮು ಕಾಶ್ಮೀರದ ವಿಶೇಷ ಸ್ಥಾನ ಮಾನ ರದ್ದು, ತ್ರಿವಳಿ ತಲಾಖ್ ರದ್ದು ಇದರ ಸಂಕೇತ ಎಂದು ಪ್ರಧಾನಿ ತಿಳಿಸಿದರು.