ಮನಾಲಿ: ಏಳು ತಿಂಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ದೇಶದ ಇತರ ಪ್ರದೇಶಕ್ಕೆ ಮೊದಲ ಭೇಟಿ ನೀಡುತ್ತಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಶಿಲಾನ್ಯಾಸ ಸಮಾರಂಭ ಹೊರತುಪಡಿಸಿದರೆ ಇತರ ಯಾವುದೇ ಕಾರ್ಯಕ್ರಮದಲ್ಲಿ ಪ್ರಧಾನಿ ನೇರವಾಗಿ ಭಾಗವಹಿಸಿರಲಿಲ್ಲ.
ಇದೀಗ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಕನಸಾಗಿದ್ದ ಸುರಂಗ ಮಾರ್ಗ ಯೋಜನೆಯನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಸಂಬಂಧ ಪ್ರಧಾನಿ ಮೋದಿ ಮನಾಲಿ ತಲುಪಿದ್ದಾರೆ.
3200 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸುರಂಗ ಮಾರ್ಗ ನಿರ್ಮಿಸಲಾಗಿದೆ.ಸಮುದ್ರಮಟ್ಟದಿಂದ ಇದು 10,000 ಅಡಿ ಎತ್ತರದಲ್ಲಿದೆ.